Local News

ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸಚಿವ ಶಿವಾನಂದ ಪಾಟೀಲ ಸೂಚನೆ

WhatsApp Group Join Now
Telegram Group Join Now

ಸಿದ್ದೇಶ್ವರ ಜಾನುವಾರು ಜಾತ್ರೆ ವ್ಯವಸ್ಥಿತವಾಗಿ ಆಯೋಜನೆಗೆ ಸಚಿವ ಶಿವಾನಂದ ಪಾಟೀಲ ಸೂಚನೆ

ವರದಿ:ಲಾಲಸಾಬ ಸವಾರಗೋಳ ಸಂಕಲ್ಪ ವಾರ್ತೆ ವಿಜಯಪುರ

ವಿಜಯಪುರ:ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.10ರಿಂದ 18ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ, ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆ-ತಡೆಯಾಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಜಾತ್ರೆ ಆಯೋಜಿಸುವಂತೆ ಅವರು ಸೂಚನೆ ನೀಡಿದರು.

ಜಾತ್ರೆಯಲ್ಲಿ ಅಂದಾಜು 50 ರಿಂದ 60 ಸಾವಿರ ಜಾನುವಾರು ಬರುವ ಸಾಧ್ಯತೆ ಇರುವುದರಿಮದ ಜಾನುವಾರುಗಳಿಗೆ ರೋಗ ನಿರೋಧ ಲಸಿಕೆ ನೀಡಲು, ಸುಮಾರು 50 ಜನ ಪಶು ವೈದ್ಯಕೀಯ ಪದವೀಧರರನ್ನು ಆಹ್ವಾನಿಸಿ ಅವರಿಂದ ಜಾನುವಾರುಗಳಿಗೆ ವ್ಯವಸ್ಥಿತವಾಗಿ ಕಟ್ಟಲು ಹಾಗೂ ಹೊಸ ಹೊಸ ತಳಿಯ ಜಾನುವಾರುಗಳ ಪ್ರದರ್ಶನ ಹಾಗೂ ಜಾತ್ರೆಯಲ್ಲಿ ವಿವಿಧ ವಸ್ತು ಪ್ರದರ್ಶನ ಮಳಿಗೆಗಳ ಆಯೋಜನೆಗೆ ಅವರು ಸೂಚಿಸಿದರು.

ಒಂದು ವಾರಕ್ಕೂ ಹೆಚ್ಚಿನ ಕಾಲ ಜಾತ್ರೆ ನಡೆಯುವುದರಿಂದ ಚಳಿಗಾಲವಿರುವುದರಿಂದ ಜಾನುವಾರುಗಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ, ಔಷದಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಸೂಕ್ತ ವೈದ್ಯೋಪಚಾರಕ್ಕೆ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿ, 3 ತಂಡಗಳನ್ನು ರಚಿಸಿ ವೈದ್ಯಕೀಯ ಸೇವೆ ಒದಗಿಸಬೇಕು. ಅತಿ ಹೆಚ್ಚು ಜನರು ಭಾಗವಹಿಸುವುದರಿಂದ ಸಾರ್ವಜನಿಕರು, ರೈತರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಕೇಂದ್ರ, ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳಿಗೆ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಔಷಧಿ ಸಿಂಪರಣೆ (ಫಾಗಿಂಗ್) ಹಾಗೂ ಜಾತ್ರೆಯಲ್ಲಿ ದಿನನಿತ್ಯ ಶೇಖರಣೆಯಾಗುವ ಕಸವನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಮಹಾನಗರ ಪಾಲಿಕೆಯಿಂದ ಪಬ್ಲಿಕ್ ಮೊಬೈಲ್ ಶೌಚಾಲಯ ವ್ಯವಸ್ಥೆ, ಹೆಸ್ಕಾಂದಿಂದ ತಾತ್ಕಾಲಿಕವಾಗಿ ವಿದ್ಯುತ್ ವ್ಯವಸ್ಥೆ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.

ಜಾನುವಾರು ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಕೇಂದ್ರ ಬಸ್ ನಿಲ್ದಾಣದಿಂದ ಸೂಕ್ತ ಸಾರಿಗೆ ವ್ಯವಸ್ಥೆ, ಮುಖ್ಯ ರಸ್ತೆಯಿಂದ ಜಾನುವಾರು ಜಾತ್ರೆ ಸ್ಥಳಕ್ಕೆ ಹೋಗುವ ರಸ್ತೆಯನ್ನು ಸುಗಮಗೊಳಿಸಿ, ಜಾತ್ರೆಗೆ ಹೋಗುವ ರೈತರಿಗೆ ಅನುಕೂಲ ಕಲ್ಪಿಸುವುದು, ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನ ನಿಲುಗಡೆ, ಪೋಲಿಸ್ ಬಂದೋಬಸ್ತ, ಹಾಗೂ ಪ್ರತಿ ದಿನ ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿ ಕಾರ್ಯಕ್ರಮಗಳ ಆಯೋಜನೆ ಹಾಗೂ ಜಾನುವಾರುಗಳ ಮಾರಾಟದ ನಂತರ ರಸೀದಿ ನೀಡುವ ಸಂದರ್ಭದಲ್ಲಿ ಜಾನುವಾರುಗಳನ್ನು ಮಾರಾಟ ಮಾಡುವವರು ಹಾಗೂ ಕೊಳ್ಳುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ ಪಡೆದುಕೊಳ್ಳುವಂತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ ಕವಿತಾ ಆರ್. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ವಿ.ಶೈಲಜಾ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೊಣಸಗಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Back to top button
error: Content is protected !!